
- This event has passed.
Ugadi_2025_Almere
ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ